ಹೆಬ್ರಿ:ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಶೇಕಡ 3 ರಿಂದ 7.5 ಕ್ಕೆ ಹೆಚ್ಚಳ ಮಾಡುವ ಕುರಿತು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯು ಇಂದು ಹೆಬ್ರಿ ತಹಸೀಲ್ದಾರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
1958ರಲ್ಲಿ ನಿಗದಿಯಾಗಿದ್ದ ಶೇಕಡ 3ರ ಮೀಸಲಾತಿ ಪ್ರಮಾಣವಾಗಿದ್ದು, 1961 ರ ಜನಗಣತಿಯಲ್ಲಿ ಪರಿಶಿಷ್ಟ ಪಂಗಡದವರ ಜನಸಂಖ್ಯೆ 1,92,096ರಷ್ಟಿದ್ದು, ಮುಂದಿನ 5 ಜನಗಣತಿಯಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿ 2011ರಲ್ಲಿ 42,48,987 ಆಗಿರುತ್ತದೆ.ಪರಿಶಿಷ್ಟ ಪಂಗಡದವರ ಜನಸಂಖ್ಯೆ 1961 ರ ಜನಗಣತಿಗೆ ಹೋಲಿಸಿದಲ್ಲಿ 22.11 ರಷ್ಟು ಹೆಚ್ಚಾಗಿರುತ್ತದೆ.
ಆದರೆ ಮೀಸಲಾತಿ ಪ್ರಮಾಣ ಶೇಕಡ 3 ರಷ್ಟೆ ಇದೆ.ಪರಿಶಿಷ್ಟ ಪಂಗಡದವರಿಗೆ ಪ್ರಾತಿನಿಧ್ಯ ಸಂಬಂಧಪಟ್ಟಂತೆ ಅನೇಕ ವರ್ಷಗಳಿಂದ ದೊಡ್ಡ ಅನ್ಯಾಯವಾಗಿರುತ್ತದೆ.ಆದ್ದರಿಂದ ಮೀಸಲಾತಿ ಪ್ರಮಾಣವನ್ನೇ ಜನಸಂಖ್ಯೆಗನುಗುಣವಾಗಿ ಶೇಕಡ 7.5ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ.ಈ ಸಂದರ್ಭದಲ್ಲಿ ಕ್ರಿಯಾ ಸಮಿತಿಯ ಸದಸ್ಯರಾದ ಗಂಗಾಧರ ಗೌಡ, ನಾಗೇಂದ್ರ ನಾಯ್ಕ, ಸುರೇಶ ನಾಯ್ಕ, ರಾಘವ ನಾಯ್ಕ, ಕೆ ಪುತ್ರನ್, ಪ್ರಕಾಶ ಗೌಡ, ಶ್ರೀಮತಿ ಗೀತಾ ಗೌಡ, ಶೇಖರ ಗೌಡ, ದಿವಾಕರ, ಚಂದ್ರ, ಬೋಗ್ರ ಉಪಸ್ಥಿತಿದ್ದರು.
Kshetra Samachara
10/05/2022 01:43 pm