ಕುಂದಾಪುರ:ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೀರಾ ಉತ್ಪಾದನಾ ಸಹಕಾರಿ ಸಂಸ್ಥೆಯ ಕಾರ್ಮಿಕರ ಲಭ್ಯತೆ ಮಾರಾಟ ವ್ಯವಸ್ಥೆ ಕುರಿತು ಸಮಗ್ರ ಚರ್ಚೆ ನಡೆಸಲು ಶಿರಸಿ ರೈತ ನಿಯೋಗ ಕುಂದಾಪುರದ ಕೋಟ ಮುರ್ತೆದಾರರ ಸಹಕಾರಿ ಸಂಘದ ಕೇಂದ್ರ ಕಚೇರಿ ಕೋಟಕ್ಕೆ ಆಗಮಿಸಿ ಮಾಹಿತಿ ಪಡೆದರು.
ನಿಯೋಗದ ನೇತೃತ್ವದಲ್ಲಿ ಅಡಿಕೆ ಮತ್ತು ಸಾಂಬಾರು ಬೆಳೆಗಾರರ ಸಂಘ ಶಿರಸಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ಶಿರಸಿ ಟಿ.ಆರ್. ಎಸ್ ಬ್ಯಾಂಕ್ ಉಪಾಧ್ಯಕ್ಷ ಲೋಕೇಶ್ ಹೆಗ್ಡೆ, ನೆಲಸಿರಿ ರೈತ ಉತ್ಪಾದಕ ಸಂಸ್ಥೆ ಅಧ್ಯಕ್ಷ ನಾರಾಯಣ ಹೆಗ್ಡೆ, ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಕೆ ಕೊರಗ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/05/2022 04:45 pm