ಬೈಂದೂರು : ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಉದ್ಧವ್ ಠಾಕ್ರೆ ಬಣ ಹಾಗೂ ಏಕನಾಥ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಘಟಾನುಘಟಿ ವಕೀಲರನ್ನು ನೇಮಕ ಮಾಡಿಕೊಂಡು ಸರ್ವೋಚ್ಛ ನ್ಯಾಯಾಲಯದಲ್ಲಿ ತಮ್ಮ ತಮ್ಮವಾದವನ್ನು ಮಂಡಿಸುತ್ತಿದ್ದಾರೆ. ಈ ತಂಡದಲ್ಲಿ ಕನ್ನಡಿಗ ದೇವದತ್ ಕಾಮತ್ ಕೂಡ ಇರುವುದು ವಿಶೇಷ.
ದೇವದತ್ ಕಾಮತ್ ಈ ಹಿಂದೆ ಹಿಜಾಬ್ ವಿದ್ಯಾರ್ಥಿನಿಯರ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ದೇವದತ್ ಕಾಮತ್ ಇದೀಗ ಶಿವಸೇನೆಯ ವಕೀಲರಾಗಿದ್ದಾರೆ.
ಸದ್ಯ ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ನ್ಯಾಯಾಲಯದಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎನ್ನುವುದರ ಬಗ್ಗೆ ಶಿವಸೇನೆಗೆ ಸಲಹೆ ಸೂಚನೆ ನೀಡುತ್ತಿದ್ದಾರೆ. ಶಿವಸೇನೆಯ ಕಾನೂನು ಸಲಹೆಗಾರರಾಗಿ ಅವರು ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ.
Kshetra Samachara
29/06/2022 11:28 am