ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ವತಿಯಿಂದ ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಬಗ್ಗೆ ಅರಿವು ಕಾರ್ಯಯಕ್ರಮವನ್ನು ಶಾರದಾ ಪ್ರೌಢ ಶಾಲೆ ಚೇರ್ಕಾಡಿ ಇಲ್ಲಿ ಆಯೋಜಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ಸಮನ್ಮೂಲ ವ್ಯಕ್ತಿಯಾಗಿ ಶಾಲಾ ಮಕ್ಕಳಿಗೆ ಬಾಲನ್ಯಾಯ ಕಾಯ್ದೆ ಬಗ್ಗೆ ಮಾತನಾಡಿ ಬಾಲ್ಯವಿವಾಹ .ಬಾಲಕಾರ್ಮಿಕ ಕಾಯ್ದೆ ಬಗ್ಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯ ವೈಖರಿ ಬಗ್ಗೆ ವಿವರಿಸಿದರು .ಪ್ರಭಾಕರ ಆಚಾರ್ ಕಾನೂನು ಪರಿವೀಕ್ಷಣಾಧಿಕಾರಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಮಾತನಾಡಿ 18 ವರ್ಷದೊಳಗಿನ ಮಕ್ಕಳಿಗೆ ಮಾನಸಿಕ,ದೈಹಿಕ,ಲೈಂಗಿಕ ದೌರ್ಜನ್ಯ ಆದಲ್ಲಿ ಯಾವುದೇ ಭಯ ಪಡದೆ ದೂರು ನೀಡಿ .ನಿಮ್ಮ ರಕ್ಷಣೆ ನಮ್ಮ ಹೊಣೆ ಎನ್ನುವಂತೆ ಮಕ್ಕಳಿಗೆ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು .ಕಾರ್ಯಕ್ರಮದಲ್ಲಿ ಮುಖ್ಯೋಪಾದ್ಯಾಯರಾದ ಮಂಜುನಾಥ್ ನಾಯ್ಕ್ .ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ .ಸಮಾಜ ಕಾರ್ಯಕರ್ತ ಯೋಗೀಶ್ ಉಪಸ್ಥಿತರಿದ್ದರು .
Kshetra Samachara
28/01/2021 10:17 am