ಕುಂದಾಪುರ: ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನರಾದರು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದ ನಾರಾಯಣ ಗಾಣಿಗರು ಕಳೆದ ೨೮ ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ತಿರುಗಾಟ ಮಾಡಿದ್ದರು. ದ್ರೌಪದಿ, ಮಂಡೋದರಿ, ಚಿತ್ರಾಂಗದೆ, ತಾರೆ, ಶಶಿಪ್ರಭೆ, ಮೀನಾಕ್ಷಿ ಮುಂತಾದ ಪಾತ್ರಗಳಲ್ಲಿ ಮಿಂಚಿದ್ದಾರೆ.
ಅವರಿಗೆ 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.
Kshetra Samachara
02/02/2021 10:16 pm