ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ರಾಜಕೀಯ ಧುರೀಣ, ಹಿರಿಯ ಸಹಕಾರಿ ಪಟ್ಲ ಅಣ್ಣಯ್ಯ ನಾಯಕ್ ಇನ್ನಿಲ್ಲ

ಮಣಿಪಾಲ: ವಿವಿಧ ಶಾಲೆಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿ ತಮ್ಮ ರಾಜಕೀಯ ಜೀವನದಲ್ಲಿ ಜೆಡಿಎಸ್ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿ ಗುರುತಿಸಿಕೊಂಡಿದ್ದ ರಾಜಕೀಯ ನೇತಾರ, ಪಟ್ಲ ಅಣ್ಣಯ್ಯ ನಾಯಕ್ ಇಂದು ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಉದರ ನಿಮಿತ್ತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು. ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೂ ತಮ್ಮ ಪ್ರಭಾವವನ್ನು ಬೀರಿದ್ಧರು. ಪರ್ಕಳದ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅನೇಕ ವಿದ್ಯಾರ್ಥಿಗಳು ಮತ್ತು ಶಿಷ್ಯವೃಂದವನ್ನು ಹೊಂದಿದ್ದರು.ಗುತ್ತಿಗೆದಾರರ ರಾಜ್ಯ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹಾಗೂ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು.ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.ಇವರ ನಿಧನಕ್ಕೆ ಮೋಹನ್ ದಾಸ್ ನಾಯಕ್ ಪರ್ಕಳ ಹಾಗೂ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಸಂತಾಪ ಸೂಚಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/08/2021 05:24 pm

Cinque Terre

2.63 K

Cinque Terre

0