ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸಾಣೂರು, ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಾಗೂ ಯೂತ್ ಫಾರ್ ಸೇವಾ ಇವರ ಸಂಯುಕ್ತ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ರಮಿತಾ ಶೈಲೇಂದ್ರ ರಾವ್ ಪಿಂಗಾರ ಅರಳಿಸುವುದರ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಹಿಳೆಯರು ನಿಸರ್ಗದತ್ತವಾಗಿ ಸಿಗುವ ಪೌಷ್ಠಿಕ ಆಹಾರವನ್ನು ತಿನ್ನುವುದರ ಜೊತೆಗೆ ತಮ್ಮ ಆರೋಗ್ಯವನ್ನು ನೋಡಿಕೊಳ್ಳಬೇಕು ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರದ ಕುರಿತಂತೆ ಉಪಯುಕ್ತ ಮಾಹಿತಿಯನ್ನು ಡಾ. ಹರ್ಷ ಕಾಮತ್ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೀಪಿಕಾ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ರಾದ ಶಾರದ ರೈ , ಮಲ್ಲಿಕಾ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿ ಸುನೀತಾ,ಸಂಯೋಜಕಿ ವಿಜಯ ,ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
Kshetra Samachara
08/09/2021 08:05 pm