ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಸದಾಶಿವ ದೇವಾಡಿಗ ಆಯ್ಕೆ

ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷರಾಗಿದ್ದ ನ್ಯಾಯವಾದಿ ಶೇಖರ್ ಮಡಿವಾಳ ಅವರು ವೈಯಕ್ತಿಕ ಕಾರಣಗಳಿಂದ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಸದಾಶಿವ ದೇವಾಡಿಗ ಆಯ್ಕೆಯಾಗಿದ್ದಾರೆ.

ಕ್ಷೇತ್ರದ ಜನರ ಅಭಿಪ್ರಾಯದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿಯವರ ಶಿಫಾರಸಿನ ಮೇರೆಗೆ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್, ಸದಾಶಿವ ದೇವಾಡಿಗ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

Edited By :
Kshetra Samachara

Kshetra Samachara

08/10/2020 06:43 pm

Cinque Terre

5.49 K

Cinque Terre

0

ಸಂಬಂಧಿತ ಸುದ್ದಿ