ಕುಂದಾಪುರ: ಸ್ವಾವಲಂಬನಾ ಹೊಲಿಗೆ ಕೇಂದ್ರದ ಸ್ಥಳಾಂತರದ ವಿಷಯದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರು ರಾಜಕೀಯ ಮಾಡುತ್ತಿದ್ದು, ಇದು ಅವರಿಗೆ ಶೋಭೆ ತರುವಂತದಲ್ಲ ಎಂದು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಮಂಗಳವಾರ ಸಂಜೆ ಚಿತ್ತೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ದೃಷ್ಟಿಯಲ್ಲಿ ಈ ರಾಜಕೀಯ ನಡೆಯುತ್ತಿದ್ದು, ಈ ಬಾರಿ ವಂಡ್ಸೆಯಲ್ಲಿಯೂ ಬಿಜೆಪಿ ಪಕ್ಷದ ಬೆಂಬಲಿತರು ಅಧಿಕಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.
ಇನ್ನೂ ವಂಡ್ಸೆಯಲ್ಲಿ ಹೊಲಿಗೆ ಕೇಂದ್ರ ನಡೆಸುತ್ತಿದ್ದ ಮಹಿಳೆಯರನ್ನು ನಾವು ಬೀದಿಗೆ ಹಾಕಿಲ್ಲ.
ಜಿಲ್ಲಾ ಆರೋಗ್ಯಾಧಿಕಾರಿಯವರ ಜೊತೆ ಚರ್ಚಿಸಿ, ಸ್ಥಳಾಂತಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿ ಕೊಟ್ಟಿದ್ದೇವೆ ಎಂದು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಬೈಂದೂರಿನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ 1,350 ಕೋಟಿ ರೂ ಅನುದಾನ ಬಂದಿದೆ.
ವಿಮಾನ ನಿಲ್ದಾಣ ಕೇಂದ್ರ ಸೇರಿದಂತೆ ಈ ಹಿಂದೆ ಭರವಸೆ ನೀಡಿದ್ದ ಎಲ್ಲ ಯೋಜನೆಗಳ ಅನುಷ್ಠಾನಕ್ಕೂ ಪ್ರಯತ್ನ ನಡೆಯುತ್ತಿದೆ.
ಶಾಸಕರಾಗಿದ್ದ ಗೋಪಾಲ ಪೂಜಾರಿಯವರು ನಮ್ಮ ಮೇಲೆ ಮಾಡುತ್ತಿರುವ ಎಲ್ಲ ಆರೋಪಗಳಿಗೂ ನನ್ನ ಬಳಿ ದಾಖಲೆ ಇದ್ದು, ಎಲ್ಲಿ ಬೇಕಾದರೂ ಒದಗಿಸಲು ನಾನು ಸಿದ್ದನಿದ್ದೇನೆ ಎಂದರು.
Kshetra Samachara
21/10/2020 03:42 pm