ಉಡುಪಿ: ವಕ್ಫ್ ಬೋರ್ಡ್ ಅಕ್ರಮದ ವಿರುದ್ಧ 'ನಮ್ಮ ಭೂಮಿ ನಮ್ಮ ಹಕ್ಕು'ಅಭಿಯಾನದಡಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು.
ಬೆಳಿಗ್ಗೆ ಗಂಟೆ 10 ಗಂಟೆಗೆ ಪ್ರಾರಂಭವಾದ ಧರಣಿ ಸಂಜೆಯ ವರೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ ನಡೆಯಲಿದೆ. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ, ಒಡೆದು ಆಳುವ ನೀತಿ, ಸ್ವಾರ್ಥ ರಾಜಕಾರಣದ ಫಲವಾಗಿ ರೈತರ, ಮಠಮಾನ್ಯಗಳ ಅಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಬಿಜೆಪಿ ಮುಖಂಡರು ಖಂಡಿಸಿದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.ಧರಣಿಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಮುಖಂಡರು ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು ಭಾಗಿಯಾದರು.
PublicNext
21/11/2024 01:16 pm