ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಕ್ಷೇತ್ರ ಕಾರ್ಯಕಾರಿಣಿಗೆ ಕಾಪು ಬಿಜೆಪಿ ಕಚೇರಿಯಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್ ಚಾಲನೆ ನೀಡಿದರು.
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಸ್ತರದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಅಪೇಕ್ಷಿತರಾಗಿದ್ದ ಸಭೆಯನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶಾಸಕರು ಶುಭ ಕೋರಿದರು.
ಹಿರಿಯ ಬಿಜೆಪಿ ಮುಖಂಡ ಗುರ್ಮೆ ಸುರೇಶ್ ಶೆಟ್ಟಿ, ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಗೀತಾಂಜಲಿ ಸುವರ್ಣ, ಕೇಸರಿ ಯುವರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಕ್ಷೇತ್ರಾಧ್ಯಕ್ಷೆ ಸುಮಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಖಾ ಶೈಲೇಶ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
07/11/2020 03:31 pm