ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ : ಕೆ. ಉದಯ ಕುಮಾರ್ ಶೆಟ್ಟಿ

ಉಡುಪಿ : ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು ಸಾಧಿಸಿರುವುದು, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪರ ಆಡಳಿತ ವೈಖರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಘಟನಾ ಚತುರತೆಗೆ ಸಾಕ್ಷಿ.

ಈ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆ ಗೆಲುವಿನ ಬಗ್ಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿ ಬಳಿ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗಿನಂತಿದ್ದು ಗೊಂದಲದ ಗೂಡಾಗಿರುವ ನಾಯಕತ್ವ ಈ ಫಲಿತಾಂಶದಿಂದ ಜಗಜ್ಜಾಹೀರಾಗಿದೆ.

ಪ್ರಧಾನಿ ಮೋದಿ ಪ್ರಭಾವ ಬಿಹಾರದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ನೀಡಿದ್ದು ದೇಶದೆಲ್ಲೆಡೆ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಗಳಿಸಲಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾಲ್ಯಾನ್, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ , ಜಿಲ್ಲಾ ಸಹ ವಕ್ತಾರರಾದ ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಪ್ರಮುಖರಾದ ರಶ್ಮಿತಾ ಬಿ. ಶೆಟ್ಟಿ, ಮಂಜುನಾಥ್ ಮಣಿಪಾಲ್, ಆಲ್ವಿನ್ ಡಿಸೋಜಾ, ರೋಷನ್ ಶೆಟ್ಟಿ, ದಿನೇಶ್ ಅಮೀನ್, ಜಗದೀಶ್ ಆಚಾರ್ಯ, ಕಿಶೋರ್ ಕರಂಬಳ್ಳಿ, ಗಿರಿಧರ್ ಆಚಾರ್ಯ, ರಘುವೀರ್ ಶೆಣೈ, ಸಂತೋಷ್ ಸುವರ್ಣ ಬೊಳ್ಜೆ, ಶರತ್ ಶೆಟ್ಟಿ ಉಪ್ಪುಂದ, ವಿನೋದ್ ರಾಜ್ ಶಾಂತಿನಿಕೇತನ, ಅವಿನಾಶ್, ಪ್ರವೀಣ್ ಕುಮಾರ್, ಸತೀಶ್ ಉದ್ಯಾವರ, ಅಭಿರಾಜ್ ಸುವರ್ಣ, ಚಂದ್ರಶೇಖರ್ ಪ್ರಭು, ಶಿವರಾಮ ಕಾಡಿಮಾರ್, ಲೀಲಾ ಅಮೀನ್, ಪೂರ್ಣಿಮಾ ಶೆಟ್ಟಿ, ಸುಬೇದ, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಲೈಲಾ ಪ್ರಭಾವತಿ, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

12/11/2020 12:54 pm

Cinque Terre

3.13 K

Cinque Terre

1

ಸಂಬಂಧಿತ ಸುದ್ದಿ