ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಕೀಯ ಪ್ರೇರಿತವಾಗಿ ವಿರೋಧ ಪಕ್ಷವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ: ಸಲೀಮ್ ಅಹಮ್ಮದ್

ಉಡುಪಿ: ಸಂಪತ್ ರಾಜ್ ಬಂಧನ ರಾಜಕೀಯ ಪ್ರೇರಿತವಾಗಿದೆ.ಪೊಲೀಸರು ಕಾನೂನು ಪಾಲನೆ ಮಾಡಲಿ.

ಪೊಲೀಸರ ತನಿಖೆಗೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ ತನಿಖೆ ನೆಪದಲ್ಲಿ ರಾಜಕೀಯ ಹಿತಾಸಕ್ತಿ ಸಾಧಿಸಬಾರದು.

ರಾಜ್ಯದ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಗುರಿ ಮಾಡುತ್ತಿದೆ ಎಂದು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲಿಮ್ ಅಹಮ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು,ಪೊಲೀಸರಿಗಿಂತ ಮೊದಲೇ ಬಿಜೆಪಿಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ ಇದು ಹೇಗೆ ಸಾಧ್ಯ?

ಅವರೇನು ಪೊಲೀಸ್ ಅಧಿಕಾರಿಗಳಾ? ಲಾ ಮಿನಿಸ್ಟರ್ ಗಳಾ ? ಡಿಜೆ ಹಳ್ಳಿ, ಕೆಜಿಹಳ್ಳಿ ಪ್ರಕರಣದಲ್ಲಿ ನೂರಕ್ಕೂ ಅಧಿಕ ಜನರ ಬಂಧನವಾಗಿದೆ.

ಈ ಘಟನೆ ಪೊಲೀಸ್ ಇಲಾಖೆಯ ವೈಫಲ್ಯದಿಂದ ನಡೆದಿದೆ.

ಈ ಘಟನೆಗೆ ಸಂಬಂಧಿಸಿ ಸಾಕಷ್ಟು ಜನ ಅಮಾಯಕರನ್ನು ಬಂಧಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನಮ್ಮ ನಾಯಕರು.

ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ.ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿರುವುದು ಸರಿಯಾಗಿದೆ.

ಆದರೆ ರಾಜಕೀಯ ಪ್ರೇರಿತವಾಗಿ ವಿರೋಧ ಪಕ್ಷವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

17/11/2020 03:27 pm

Cinque Terre

3.1 K

Cinque Terre

0

ಸಂಬಂಧಿತ ಸುದ್ದಿ