ಉಡುಪಿ: ರಾಜ್ಯಾದ್ಯಂತ ಅಂರ್ತಜಲ ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ, ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ, ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು.
ಅವರು ಬೈಂದೂರಿನ ಪಡುವರಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ 3986 ಕೋಟಿ ರೂ. ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ದಕ್ಷಿಣ ಕನ್ನಡದಲ್ಲಿ 446, ಉಡುಪಿಯಲ್ಲಿ 424 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು 5 ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.
ಕಿಂಡಿ ಅಣೆಕಟ್ಟು ಮೂಲಕ ನೀರನ್ನು ಸಂಗ್ರಹಿಸಿ, ಕುಡಿಯುವ ನೀರು ಮತ್ತು ಕೃಷಿಗೆ ಬಳಸಲಾಗುವುದು ಎಂದ ಅವರು, ಕಿಂಡಿ ಆಣೆಕಟ್ಟುಗಳ ಹಲಗೆಗಳ ನಿರ್ವಹಣೆಗೆ 4 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
Kshetra Samachara
25/11/2020 05:24 pm