ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: "ಕೇಂದ್ರ ಸರಕಾರಕ್ಕೆ ಕಾರ್ಮಿಕರ ಮೇಲೆ ಅನುಕಂಪವಿಲ್ಲ"

ಕಾಪು: ಕೇಂದ್ರ ಸರ್ಕಾರ ಕಾರ್ಮಿಕರ ಮೇಲೆ ಅನುಕಂಪ ತೋರದೆ ಕಾನೂನನ್ನು ಜಾರಿಗೆ ತರುತ್ತಿದೆ. ಅಲ್ಲದೆ, ಬಜಪೆ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ವಹಿಸಿರುವುದು ಅಕ್ಷಮ್ಯ.

ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿಲ್ಲ ಎಂದು ಸಿಐಟಿಯು ಕಟ್ಟಡ ಕಾರ್ಮಿಕರ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಪಡುಬಿದ್ರಿಯಲ್ಲಿ ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಪಡುಬಿದ್ರಿ ಪೇಟೆಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಬಿಸಿಯೂಟ ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾಯಂಗೊಳಿಸಬೇಕು.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರ ಮೊಟಕುಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.

ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು ಕೇಂದ್ರದ ನೀತಿ ವಿರುದ್ಧ ಘೋಷಣೆ ಕೂಗಿದರು.

ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ವಾಮನ ಅಮೀನ್ ಪಡುಬಿದ್ರಿ, ರಘುನಾಥ್ ದೇವಾಡಿಗ ಹೆಜಮಾಡಿ, ಅಂಗನವಾಡಿ ನೌಕರರ ಸಂಘದ ವಾಣಿ ಮತ್ತಿತರರು ಹಾಜರಿದ್ದರು.

Edited By : Nirmala Aralikatti
Kshetra Samachara

Kshetra Samachara

26/11/2020 06:30 pm

Cinque Terre

3.99 K

Cinque Terre

2

ಸಂಬಂಧಿತ ಸುದ್ದಿ