ಕಾಪು: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳ್ಳೆ ಗ್ರಾಪಂ ವ್ಯಾಪ್ತಿಯ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಬೆಳ್ಳೆ ಗ್ರಾಪಂ ಮಾಜಿ ಉಪಾಧ್ಯಕ್ಷ, ಉದ್ಯಮಿ ಹರೀಶ್ ಶೆಟ್ಟಿ ಹಾಗೂ ಇತರರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಉಪಸ್ಥಿತಿಯಲ್ಲಿ ಹರೀಶ್ ಶೆಟ್ಟಿ ಯವರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಉಪಾಧ್ಯಕ್ಷರಾದ ನವೀನ್ ಎಸ್. ಕೆ., ಪವಿತ್ರ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಪುರಸಭೆ ಅಧ್ಯಕ್ಷ ಅನಿಲ್ ಶೆಟ್ಟಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಬೆಳ್ಳೆ ಪಂಚಾಯತ್ ಉಸ್ತುವಾರಿ ಕಿರಣ್ ಆಳ್ವ, ಬೆಳ್ಳೆ ಶಕ್ತಿಕೇಂದ್ರ ಪ್ರಮುಖರಾದ ರಾಜೇಂದ್ರ ಶೆಟ್ಟಿ, ಸುಧಾಕರ್ ಪೂಜಾರಿ, ಗುರುರಾಜ್ ಭಟ್, ಶಶಿಧರ್ ವಾಗ್ಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
03/12/2020 04:39 pm