ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾಪಂ ಚುನಾವಣೆಯಲ್ಲಿ ನಮ್ಮದೇ ಹವಾ ; ಕುಯಿಲಾಡಿ ವಿಶ್ವಾಸ

ಉಡುಪಿ: ಬಿಜೆಪಿ ಎಲ್ಲ ಸ್ತರಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಈ ಸುಸಂದರ್ಭ ಗ್ರಾಪಂ ಚುನಾವಣೆಯಲ್ಲಿಯೂ ಜಿಲ್ಲೆಯಾದ್ಯಂತ ಬಿಜೆಪಿ 130ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.

ಡಿ. 22, 27 ರಂದು ನಡೆಯಲಿರುವ ಈ ಚುನಾವಣೆಯಲ್ಲಿ ಬಹುಮತ ಸಾಧಿಸುವ ಜೊತೆಗೆ ಎಲ್ಲ ಗ್ರಾ ಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗರಿಷ್ಠ ಸ್ಥಾನ ಗೆಲ್ಲುವುದು ನಮ್ಮ ಗುರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಗ್ರಾಪಂ ಚುನಾವಣೆಯ ಪೂರ್ವ ಸಿದ್ಧತೆಗಾಗಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ಗ್ರಾಪಂ ಚುನಾವಣೆ ಎದುರಿಸಲು ಸರ್ವ ಸನ್ನದ್ಧವಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷದ ರಾಜ್ಯ ನಾಯಕರ ಸಮಾಗಮದೊಂದಿಗೆ ಜಿಲ್ಲೆಯ 2 ಕಡೆ ನಡೆದ ಮಂಡಲವಾರು ಗ್ರಾಮ ಸ್ವರಾಜ್ಯ ಸಮಾವೇಶ ಅತಿ ಯಶಸ್ವಿಯಾಗಿದ್ದು, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ, ಹೊಸ ಹುಮ್ಮಸ್ಸು ಮೂಡಿಸಿದೆ.

ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರತಿ ಬೂತ್ ಮಟ್ಟದಲ್ಲಿ ಪಂಚರತ್ನ, ಪೇಜ್ ಪ್ರಮುಖ್ ನೇಮಕ, ಗ್ರಾಪಂ ಮಟ್ಟದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳ ಆಯೋಜನೆ ಪಕ್ಷ ಸಂಘಟನೆಗೆ ಶಕ್ತಿ ತುಂಬಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚೈತನ್ಯ ತುಂಬಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಗ್ರಾಪಂ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಜವಾಬ್ದಾರಿ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿದರು. ಸದಾನಂದ ಉಪ್ಪಿನಕುದ್ರು ನಿರೂಪಿಸಿ, ವಂದಿಸಿದರು.

Edited By : Nirmala Aralikatti
Kshetra Samachara

Kshetra Samachara

04/12/2020 05:34 pm

Cinque Terre

5.76 K

Cinque Terre

0

ಸಂಬಂಧಿತ ಸುದ್ದಿ