ಬ್ರಹ್ಮಾವರ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಮಾಲೋಚನೆ ಸಭೆ ಹಾಗೂ ನೂತನ ಬ್ಲಾಕ್ ಅಧ್ಯಕ್ಷರ ಪದಗ್ರಹಣ ಬ್ಲಾಕ್ ಕಚೇರಿಯಲ್ಲಿ ಜರುಗಿತು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿನಕರ ಹೇರೂರು ಅವರಿಗೆ ಎಲ್ಲ ಮುಖಂಡರೊಡಗೂಡಿ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಎಲ್ಲ ಗ್ರಾಮ ಮಟ್ಟದ ಕಾರ್ಯಕರ್ತರೊಡನೆ ಸಮಾಲೋಚನೆ ನಡೆಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾರ್ಯಕರ್ತರೇ ಪಕ್ಷದ ಆಸ್ತಿ, ಅಂತಹ ಕಾರ್ಯಕರ್ತರೇ ಸ್ಪರ್ಧಿಸುವ ಚುನಾವಣೆ ಇದಾಗಿದ್ದು, ಸಂಘಟಿತವಾಗಿ ಚುನಾವಣೆ ಎದುರಿಸಿ ಪಕ್ಷದ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಬಂದು ಸಮಾಜ ಸೇವೆ ಮಾಡುವಂತಾಗಲಿ.
ಗ್ರಾಪಂ ಚುನಾವಣೆಯಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು.
ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ದುಡಿದು, ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟಿತರಾಗೋಣ ಎಂದು ಜಿಪಂ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ತಿಳಿಸಿದರು.
ಮಾಜಿ ತಾಪಂ ಸದಸ್ಯೆ ವೆರೋನಿಕಾ ಕರ್ನೇಲಿಯೋ ಅವರು ಅಭ್ಯರ್ಥಿಗಳ ಗೆಲುವಿಗಾಗಿ ಶುಭ ಹಾರೈಸಿದರು.
ಈ ಸಂದರ್ಭ ಬಿಜೆಪಿ ಕರ್ಜೆ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
Kshetra Samachara
07/12/2020 07:08 pm