ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಪಂಚಾಯಿತ್ 5ನೇ ವಾರ್ಡ್ ನ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮಾಲಿನಿ ಜತ್ತನ್ನ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಇನ್ನು ವಿಜೇತರನ್ನು ಉಡುಪಿ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ,ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಜಯಪ್ರಕಾಶ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಶರತ್ ಬೈಲಕೆರೆ ಮತ್ತು ಇನ್ನಿತರ ನಾಯಕರು ಅಭಿನಂದಿಸಿದರು.
Kshetra Samachara
15/12/2020 05:38 pm