ಕಾಪು: ಗ್ರಾಮಭಿವೃದ್ಧಿಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಬೆಳಪು ಗ್ರಾಪಂ ಮಾಜಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿಯೂ 7ನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಡಾ.ದೇವಿಪ್ರಸಾದ್ ಶೆಟ್ಟಿಯವರ ಅಧಿಕಾರದ ಅವಧಿಯಲ್ಲಿ ಬೆಳಪು ಗ್ರಾಪಂ ವ್ಯಾಪ್ತಿಯಲ್ಲಿ ಅತ್ಯಾಧುನಿಕ ವಿಜ್ಞಾನ ಸಂಶೋಧನೆ ಕೇಂದ್ರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಮೌಲಾನ ಅಜಾದ್ ಅಲ್ಪಸಂಖ್ಯಾತ ವಸತಿ ಶಾಲೆ, ಪೊಲೀಸ್ ಸಂಶೋಧನೆ ಕೇಂದ್ರ, ಕೈಗಾರಿಕೆ ಪಾರ್ಕ್, ವಸತಿರಹಿತರಿಗೆ ವಸತಿ ಸೌಲಭ್ಯ ಬೆಳಪು ಗ್ರಾಮಕ್ಕೆ ಒದಗಿಸಿದ್ದಾರೆ.
ಡಾ.ದೇವಿಪ್ರಸಾದ್ ಶೆಟ್ಟಿ ಸೇರಿ, ಬೆಳಪು ಗ್ರಾಮಾಭಿವೃದ್ಧಿ ಸಮಿತಿಯ ಒಟ್ಟು ಐದು ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನುಳಿದ ಆರು ಅಭ್ಯರ್ಥಿಗಳಲ್ಲಿ ಕೆಲವು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
18/12/2020 07:29 pm