ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾ.ಪಂ ಚುನಾವಣೆ ಡಿ.22ರಂದು ವೇತನ ಸಹಿತ ರಜೆ ಘೋಷಣೆ

ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಡಿಸೆಂಬರ್ 22ರಂದು ಎಲ್ಲ ಸರ್ಕಾರಿ, ಅನುದಾನಿತ ಸಂಸ್ಥೆ ನೌಕರರಿಗೆ ವೇತನಸಹಿತ ರಜೆಯನ್ನು ಘೋಷಿಸಲಾಗಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು , ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್‌ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಬ್ಲಿಷ್‌ಮೆಂಟ್‌ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 22ರಂದು ಕರ್ನಾಟಕ ಪಂಚಾಯತ್ ರಾಜ್ ಚುನಾವಣೆಯನ್ನು ನಡೆಸುವ ನಿಯಮಗಳು, 1993ರ ನಿಯಮ 114ನ್ನು ಪ್ರಜಾ ಪ್ರತಿನಿಧಿ ಕಾಯ್ದೆ 1954ರ ಸೆಕ್ಷನ್ -135ಬಿ ರಡಿಯಲ್ಲಿ ವೇತನಸಹಿತ ರಜೆಯನ್ನು ಘೋಷಿಸಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

Edited By : Vijay Kumar
Kshetra Samachara

Kshetra Samachara

20/12/2020 09:07 pm

Cinque Terre

4.56 K

Cinque Terre

1

ಸಂಬಂಧಿತ ಸುದ್ದಿ