ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಂಬೆ: ನಾಮಪತ್ರ ಸಲ್ಲಿಕೆ ಗೊಂದಲ; ಗ್ರಾಪಂನಲ್ಲಿ ಮಾತಿನ ಚಕಮಕಿ

ಬಂಟ್ವಾಳ: ತುಂಬೆ ಗ್ರಾ.ಪಂ.ನ ವಾರ್ಡ್ ಒಂದರಲ್ಲಿ ಅನುಸೂಚಿತ ಪಂಗಡ(ಎಸ್ಟಿ)ದ ಮೀಸಲಾದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಬಳಿಕ ಅನುಸೂಚಿತ ಜಾತಿ(ಎಸ್ಸಿ)ಯ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ವಿಚಾರ ಗೊಂದಲ, ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಗೆ ಕಾರಣವಾದ ಘಟನೆ ಶುಕ್ರವಾರ ಗ್ರಾ.ಪಂ.ವಠಾರದಲ್ಲಿ ನಡೆದಿದೆ.

ಮೊದಲ ಹಂತದ ಗ್ರಾ.ಪಂ.ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಶುಕ್ರವಾರ ಮಧ್ಯಾಹ್ನದವರೆಗೂ ಅನುಸೂಚಿತ ಪಂಗಡದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಮಹಿಳೆಯೊಬ್ಬರು ನಾಮಪತ್ರ ಸಲ್ಲಿಸಿದ್ದು, ಆದರೆ ಇದಕ್ಕೆ ರಾಜಕೀಯ ಪಕ್ಷವೊಂದರ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರಕ್ಕೆ ಸಂಬಂಧಿಸಿ ಸ್ಥಳದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಜಮಾಯಿಸಿ ಗೊಂದಲ ಉಂಟಾಯಿತು. ತಹಶೀಲ್ದಾರ್ ರಶ್ಮಿ ಎಸ್.ಆರ್., ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು.

ನಿಯಮದ ಪ್ರಕಾರವೇ ಎಸ್ಸಿ ಅಭ್ಯರ್ಥಿಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಜತೆಗೆ ಇದು ಹೊಸ ನಿಯಮವೇನಲ್ಲ, ಹಿಂದಿನಿಂದಲೂ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

11/12/2020 09:26 pm

Cinque Terre

17.45 K

Cinque Terre

0

ಸಂಬಂಧಿತ ಸುದ್ದಿ