ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 'ಅಮೃತ ಭಾರತಿಗೆ ಕನ್ನಡದಾರತಿ' ಶೀರ್ಷಿಕೆಯಡಿ ಉಡುಪಿ ಅಜ್ಜರಕಾಡಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಮಡಿದಿದ್ದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಗಳಾದ ಹೋರಾಟಗಾರರು ಮತ್ತು ವೀರ ಸೇನಾನಿಗಳ ಹೋರಾಟದ ನೆನಪುಗಳನ್ನು ಮೆಲುಕು ಹಾಕಿಕೊಳ್ಳುವ ನಿಟ್ಟಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಎರಡು ಕಡೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿದ ಪ್ರತಾಪ್ ಸಿಂಹ ಬಳಿಕ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
Kshetra Samachara
28/05/2022 03:04 pm