ಕುತ್ಯಾರು: ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಕಾಪು ತಾಲೂಕಿನ ಕುತ್ಯಾರು ಗ್ರಾಪಂ ವ್ಯಾಪ್ತಿಯಲ್ಲಿ 18 ಕೋಟಿ 93 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಕಟ್ಟಡವು ಭರವಸೆಯಾಗಿಯೇ ಉಳಿದಿತ್ತು.
ಇದೀಗ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಅನುದಾನ ಬಿಡುಗಡೆ ಮಾಡಿದ್ದು, ಇಂದು ಶಿಲಾನ್ಯಾಸ ನೆರವೇರಿಸಿದ್ದೇವೆ ಎಂದರು.
ಜಿಲ್ಲಾಧಿಕಾರಿ ಜಿ.ಜಗದೀಶ್, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಸ್ಥಳೀಯ ಜಿಪಂ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಎಸ್ .ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕ ಪ್ರೇಮ್ ಸಾಗರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/11/2020 01:11 pm