ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಕ್ರೇನ್‌ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿ; ಕ್ಯಾಂಪಸ್ ಫ್ರಂಟ್ ಮೊಂಬತ್ತಿ ಪ್ರತಿಭಟನೆ

ಉಡುಪಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಹೇಳಿದೆ. ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮ ಸೈನಿಕ ಸ್ಮಾರಕದ ಎದುರು ಮೊಂಬತ್ತಿ ಪ್ರತಿಭಟನೆ ನಡೆಯಿತು.

ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಅಲ್ಲಿ ಸಿಲುಕಿದ್ದಾರೆ. ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದಾರೆ. ವಿದ್ಯಾರ್ಥಿಗಳು ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ ನವೀನ್ ಎಂಬ ವಿದ್ಯಾರ್ಥಿ ರಷ್ಯಾದ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತನ್ನ ಪ್ರಜೆಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕದನ ಪೀಡಿತ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಸಹಿತ ಎಲ್ಲರನ್ನೂ ರಕ್ಷಣೆ ಮಾಡಬೇಕು. ವಿದ್ಯಾರ್ಥಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಎಂದು ಸಿಎಫ್ಐ ಆಗ್ರಹಿಸಿದೆ.

ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಸಾದಿಕ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/03/2022 08:27 am

Cinque Terre

9.77 K

Cinque Terre

2

ಸಂಬಂಧಿತ ಸುದ್ದಿ