ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ಆಕ್ರೋಶ

ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್ ,ಡೀಸೆಲ್ ,ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಇವತ್ತು ಪ್ರತಿಭಟನೆ ಹಮ್ಮಿಕೊಂಡಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಅಜ್ಜರಕಾಡು ಹುತಾತ್ಮ ಸೈನಿಕ ಸ್ಮಾರಕದ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಪೆಟ್ರೋಲ್ ಡೀಸೆಲ್ ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ದಿನೇದಿನೆ ಹೆಚ್ಚುತ್ತಲೇ ಇದೆ. ಆದರೆ ರಾಜ್ಯ ಮತ್ತು ಕೇಂದ್ರ ಸರಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಸಾಮಾನ್ಯ ಜನರಿಗೆ, ಮಧ್ಯಮವರ್ಗದವರಿಗೆ ,ಬಡವರಿಗೆ ಬೆಲೆ ಹೆಚ್ಚಳದಿಂದ ಕಷ್ಟವಾಗಿದೆ. ಆದರೆ ಸರಕಾರ ಮಾತ್ರ ಧರ್ಮದ ಆಧಾರದಲ್ಲಿ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ನಿರತವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.

Edited By :
PublicNext

PublicNext

09/04/2022 01:16 pm

Cinque Terre

38.44 K

Cinque Terre

4

ಸಂಬಂಧಿತ ಸುದ್ದಿ