ಹಿರಿಯಡ್ಕ: ಹಿರಿಯಡ್ಕದಲ್ಲಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಕಚೇರಿಯಲ್ಲಿ ಸಂಧ್ಯಾ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಉತ್ತರ ವಲಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಸಭೆ ನಡೆಯಿತು.
ಸಭೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಸದ್ಯದಲ್ಲೇ ನಡೆಯಲಿರುವ ಗ್ರಾ ಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಲಾಯಿತು. ಉತ್ತರ ವಲಯದ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಲಲಿತಾಂಭ,ಮಾಲತಿ ಆಚಾರ್ಯ, ಸರೋಜಿನಿ ಶೆಟ್ಟಿ, ಪುಷ್ಪಾ ಪೂಜಾರಿ, ಗೀತಾ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು
Kshetra Samachara
03/10/2020 11:19 pm