ಉಡುಪಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಕರಣದಲ್ಲಿ ಅಚಾನಕ್ ಘಟನೆಯೇ ಹೊರತು ಪೂರ್ವ ಯೋಜಿತವಲ್ಲ, ಸಂಚು ಎಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಲಕ್ನೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಆಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ ಜೋಷಿ, ಉಮಾಭಾರತಿ, ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ಘೋಷಿಸಿರುವುದು ಸತ್ಯಕ್ಕೆ ಸಂದ ಜಯ ಹಾಗೂ ಐತಿಹಾಸಿಕ ತೀರ್ಪು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Kshetra Samachara
30/09/2020 10:49 pm