ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

16 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ : ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಉಡುಪಿ: ಉಡುಪಿಯ ಅತಿ ಹೆಚ್ಚು ವಾಹನ ಸಂಚಾರದ ಪ್ರಮುಖ ರಸ್ತೆ ಮಣಿಪಾಲ - ಪೆರಂಪಳ್ಳಿ - ಅಂಬಾಗಿಲು ರಸ್ತೆಯನ್ನು ಅಗಲೀಕರಣಗೊಳಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ರೂ. 16 ಕೋಟಿ ಮಂಜೂರಾಗಿದ್ದು, ಈ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಶ್ರೀ ಕೆ ರಘುಪತಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರುಗಳಾದ ಬಾಲಕೃಷ್ಣ ಶೆಟ್ಟಿ, ಗಿರಿಧರ್ ಕರಂಬಳ್ಳಿ, ಭಾರತಿ ಪ್ರಶಾಂತ್, ಸೆಲಿನಾ ಕರ್ಕಡ ಹಾಗೂ ಸಹಾಯಕ ಆಯುಕ್ತರಾದ ರಾಜು ಕೆ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಭಟ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಗುತ್ತಿಗೆದಾರರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

12/11/2020 12:58 pm

Cinque Terre

5.78 K

Cinque Terre

5

ಸಂಬಂಧಿತ ಸುದ್ದಿ