ಉಡುಪಿ: ಹಾವಂಜೆ ಗ್ರಾಪಂ ವ್ಯಾಪ್ತಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಅಂಗಡಿಬೆಟ್ಟು ಸಂಪರ್ಕ ರಸ್ತೆಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ 50 ಲಕ್ಷ ರೂ. ಮಂಜೂರಾಗಿದ್ದು, ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಹಾವಂಜೆ ಗ್ರಾಪಂ ಸದಸ್ಯರಾದ ಉದಯ್ ಕೋಟ್ಯಾನ್, ಅಜಿತ್ ಪೂಜಾರಿ, ಗುರುರಾಜ್ ಪೂಜಾರಿ, ಕಿರಣ್ ಶೆಟ್ಟಿ, ಆಶಾ ಡಿ. ಪೂಜಾರಿ, ಮೋಹಿನಿ ಹಾಗೂ ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
22/01/2021 08:52 pm