ಉಡುಪಿ: ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮದ ಮಹಿಮಾ ಹೋಂಸ್ಟೇ ಬಳಿ ಸಾರ್ವಜನಿಕ ರಸ್ತೆಗೆ ಸ್ಥಳೀಯರಿಂದ ನಾಲ್ಕೈದು ವರ್ಷಗಳಿಂದ ತಡೆ ಉಂಟಾಗಿದ್ದು, ಸದ್ರಿ ರಸ್ತೆಯು ಸುಮಾರು 15 ಮನೆಗೆ ಸಂಪರ್ಕ ರಸ್ತೆಯಾಗಿದ್ದು ಬೈಲಕೆರೆ ಸಂಪರ್ಕರಸ್ತೆ ಯಾಗಿರುತ್ತದೆ. ಈ ಸಂಬಂಧ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸುದೀರ್ಘವಾಗಿ ಚರ್ಚಿಸಿ ಮನವೊಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಕೃಷ್ಣಯ್ಯ ಶೆಟ್ಟಿ, ಪ್ರದೀಪ್ ಶೆಟ್ಟಿ, ವಿನೋದ್, ಗಾಯತ್ರಿ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸಾಲ್ಯಾನ್ ಹಾಗೂ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಮಲ್ಪೆ ಪೊಲೀಸ್ ಉಪನಿರೀಕ್ಷಕರಾದ ತಿಮ್ಮೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
30/01/2021 10:44 pm