ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಆಸ್ಕರ್ ಮೌಲ್ಯಗಳು ಕಾಂಗ್ರೆಸ್ ಪಕ್ಷಕ್ಕೆ ಆದರ್ಶ : ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ

ಕುಂದಾಪುರ: ಆಸ್ಕರ್ ಫೆರ್ನಾಂಡೀಸ್ ಅವರ ಸೇವೆ, ಪಕ್ಷಕ್ಕೆ ಅವರು ನೀಡಿದ ಕೊಡುಗೆ, ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಅಳವಡಿಸಿಕೊಂಡ ಮೌಲ್ಯಗಳನ್ನು ಪಾಲಿಸಬೇಕಾಗಿದೆ. ನಾಡಿಗೆ ಅವರು ನೀಡಿದ ಸೇವೆಯನ್ನು ಸದಾ ಸ್ಮರಿಸುವುದು ನಮ್ಮ ಕರ್ತವ್ಯ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ಹೇಳಿದರು.

ಮಂಗಳವಾರ ಕುಂದಾಪುರ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ರಾಷ್ಟ್ರೀಯ ನೇತಾರ, ಕೇಂದ್ರ ಸರಕಾರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಅವರ ಪ್ರಥಮ ಪುಣ್ಯತಿಥ ಸಂದರ್ಭ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ಕಾಂಗ್ರೆಸ್ ಪಕ್ಷದ ವಿವಿಧ ಮಜಲುಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಸರಳ ಸಜ್ಜನ ರಾಜಕಾರಣಿಯಾಗಿ ಸಾಮಾನ್ಯ ಕಾರ್ಯಕರ್ತನ ಜೊತೆ ಉತ್ತಮ ಬಾಂಧವ್ಯ ಇರಿಸಿಕೊಂಡಿದ್ದ ಅವರು ಮಾದರಿ ರಾಜಕಾರಣಿಯಾಗಿದ್ದರು. ಅವರ ಆದರ್ಶ, ಆಡಳಿತ ವೈಖರಿ, ಉದಾತ್ತ ಮೌಲ್ಯಗಳನ್ನು ಹೊಂದಿದ್ದ ಅವರು ಧೀಮಂತ ವ್ಯಕ್ತಿಯಾಗಿದ್ದರು. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದರು.

ಬ್ಲಾಕ್ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಶ್ಯಾಮಲ ಭಂಡಾರಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಾಕೋಬ್ ಡಿಸೋಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಅಲ್ಪಸಂಖ್ಯಾತ ಘಟಕದ ಮುನಾಫ್, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ ಶೇರೆಗಾರ್ ಮೊದಲಾದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/09/2022 03:42 pm

Cinque Terre

1.55 K

Cinque Terre

0

ಸಂಬಂಧಿತ ಸುದ್ದಿ