ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆದಿವಾಸಿಗಳ ವೈದ್ಯಕೀಯ ವೆಚ್ಚ ಮರುಪಾವತಿಗೆ ಆಗ್ರಹಿಸಿ ಕರಾವಳಿ ಶಾಸಕರ ನಿಯೋಗ ಸಿಎಂಗೆ ಮನವಿ

ಕುಂದಾಪುರ: ಪರಿಶಿಷ್ಟ ಪಂಗಡದ ಆದಿವಾಸಿ ಬುಡಕಟ್ಟು ಕೊರಗ ಜನಾಂಗದ ವೈದ್ಯಕೀಯ ವೆಚ್ಚ ಮರುಪಾವತಿಗೆ ಆಗ್ರಹಿಸಿ ಶಾಸಕ ರಘುಪತಿ ಭಟ್ ಅವರ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ. ಹೆಚ್ಚಾಗಿ ನಗರ ಪ್ರದೇಶದಿಂದ ದೂರವಿದ್ದು ಕಾಡಂಚಿನಲ್ಲಿ ವಾಸವಿರುವ ಈ ಸಮುದಾಯ ತೀವ್ರ ತರಹದ ಕಾಯಿಲೆಗಳಿಗೆ ತುತ್ತಾದಾಗ ಪರಿಣಾಮಕಾರಿಯಾದ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ ಅಲ್ಲದೇ ಸರ್ಕಾರದ ಯಾವುದೇ ವಿಮಾ ಯೋಜನೆಗಳು ಉಪಯುಕ್ತವಾಗುತ್ತಿಲ್ಲ. ಆದ್ದರಿಂದ ಪ. ಪಂ, ನೈಜ ದುರ್ಬಲ ಬುಡಕಟ್ಟು ಸಮುದಾಯ, ಕೊರಗ ಸಮುದಾಯದವರಿಗೆ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಮನವಿ ಮಾಡಿಕೊಂಡರು.

ನಿಯೋಗದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವೈದ್ಯಕೀಯ ವೆಚ್ಚ ಮರುಪಾವತಿ ಮುಂದುವರೆಸಿ ತಕ್ಷಣದಲ್ಲಿ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ದೂರವಾಣಿ ಕರೆ ಮೂಲಕ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಎಂ. ಸುಕುಮಾರ್ ಶೆಟ್ಟಿ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಭಟ್ಕಳ ಶಾಸಕ ಸುನಿಲ್ ನಾಯ್ಕ ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕ ರೂಪಾಲಿ ನಾಯ್ಕ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/09/2022 08:52 pm

Cinque Terre

2.05 K

Cinque Terre

0

ಸಂಬಂಧಿತ ಸುದ್ದಿ