ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚ್ಚಿಲ: ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ ಭೇಟಿ

ಕಾಪು ಜ. 19 : ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸು ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಸಿ.‌ ಅಮೀನ್ ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ಮೂಲಕವಾಗಿ ಬಿ.ಎಸ್.ವೈ ಅವರನ್ನು ಗೌರವಿಸಲಾಯಿತು.

ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳಲಿರುವ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸಕ್ಕೆ ಈಗಾಗಲೇ 5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಹೆಚ್ಚುವರಿ 10 ಕೋಟಿ ರೂಪಾಯಿ ಬಿಡುಗಡೆಗೆ ಮನವಿ ಮಾಡಲಾಯಿತು.

ಸಂಸದೆ ಶೋಭಾ‌ ಕರಂದ್ಲಾಜೆ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯೆ ಶಿಲ್ಪಾ‌ ಜಿ. ಸುವರ್ಣ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಸುರೇಶ್ ನಾಯಕ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಕುತ್ಯಾರು ನವೀನ್‌ ಶೆಟ್ಟಿ ಹಾಗೂ ಮೊಗವೀರ ಸಮಾಜದ ವಿವಿಧ ಮುಖಂಡರು, ಕ್ಷೇತ್ರಾಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ ಸಹಿತ ವಿವಿಧ ಉಪ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

19/01/2021 12:48 pm

Cinque Terre

5.17 K

Cinque Terre

0

ಸಂಬಂಧಿತ ಸುದ್ದಿ