ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶಾಸಕರಿಂದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ, ಅಭಿವೃದ್ಧಿ ಪರಿಶೀಲನೆ

ಉಡುಪಿ: ಸಂತೆಕಟ್ಟೆ - ಕಲ್ಯಾಣಪುರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಗಲೀಕರಣಗೊಳಿಸುವ ಕುರಿತು ಚರ್ಚೆ ನಡೆಸಿದರು.

ಇನ್ನು , ಉಡುಪಿ ಉಳಿಯಾರಗೋಳಿ- ಪಡುಕೆರೆ- ಮಲ್ಪೆ ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರಾಗಿದೆ. ಈ ಸಂಬಂಧ ಶಾಸಕರು ಕಡೆಕಾರ್ ಗ್ರಾಪಂ ವ್ಯಾಪ್ತಿಯ ಟೆಲಿಫೋನ್ ಎಕ್ಸ್ ಚೇಂಜ್ ಬಳಿ 31 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

04/10/2020 05:44 pm

Cinque Terre

4.78 K

Cinque Terre

0

ಸಂಬಂಧಿತ ಸುದ್ದಿ