ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಜಿರೆ: ಪಾಕ್‌ ಪರ ಘೋಷಣೆ ಖಂಡಿಸಿ ಜ.7ರಂದು ಬೃಹತ್‌ ಪ್ರತಿಭಟನೆ

ಬೆಳ್ತಂಗಡಿ: ಉಜಿರೆಯಲ್ಲಿ ಗ್ರಾ.ಪಂ. ಮತ ಎಣಿಕೆ ವೇಳೆ ಎಸ್‌ಡಿಪಿಐ ಕಾರ್ಯಕರ್ತರ ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಖಂಡನೀಯ. ಇದನ್ನು ಖಂಡಿಸಿ ಜನವರಿ 7ರಂದು ಸಂಜೆ 3 ಗಂಟೆಗೆ ಉಜಿರೆ ಬಸ್‌ ನಿಲ್ದಾಣದ ಸಮೀಪ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್‌ ಧರ್ಮಸ್ಥಳ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಭಾಸ್ಕರ್‌ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳವು ಪೊಲೀಸರಿಗೆ ದೂರು ನೀಡಿದ್ದು, ಇದರ ತನಿಖೆ ಪ್ರಗತಿಯ ಹಂತದಲ್ಲಿದೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ಘಟನೆಯನ್ನು ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ವಿಭಾಗದ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಸಹಿತ ರಾಜ್ಯ ಮತ್ತು ವಿಭಾಗದ ಪ್ರಮುಖರು ಭಾಗವಹಿಸಲಿದ್ದಾರೆ. ಸುಮಾರು ಒಂದು ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Edited By : Vijay Kumar
Kshetra Samachara

Kshetra Samachara

05/01/2021 12:28 pm

Cinque Terre

5.74 K

Cinque Terre

2

ಸಂಬಂಧಿತ ಸುದ್ದಿ