ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಸಭೆಯಲ್ಲಿ ಶಾಸಕ ರಘುಪತಿ ಭಟ್ ಭಾಗಿ

ಕಾರ್ಕಳ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ. ಸಿ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಗಣಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಸಭೆಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು.

ಸಭೆಯಲ್ಲಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ವಿವರಗಳನ್ನು ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗಿ ಇದರ ಸಾಧಕ ಬಾಧಕಗಳ ಬಗ್ಗೆ ಮುಂದಿನ ದಿನಗಳಲ್ಲಿ ಪರಿಹಾರ ಕೈಗೊಳ್ಳುವ ಕ್ರಮದ ಬಗ್ಗೆ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಶಾಸಕರಾದ ವಿ. ಸುನೀಲ್ ಕುಮಾರ್, ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಸೌಭಾಗ್ಯ ಮಡಿವಾಳ, ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಗಣಿ ಮತ್ತು ಭೂ ವಿಜ್ಞಾನ ಸಚಿವರ ಆಪ್ತ ಕಾರ್ಯದರ್ಶಿಗಳಾದ ಕೆ. ಸಿ ವಿರೂಪಾಕ್ಷ, ಸಹಾಯಕ ಆಯುಕ್ತರಾದ ರಾಜು ಕೆ, ಜಿಲ್ಲಾ ಅರಣ್ಯಾಧಿಕಾರಿಗಳಾದ ಆಶಿಶ್, ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

09/01/2021 10:06 am

Cinque Terre

2.21 K

Cinque Terre

0

ಸಂಬಂಧಿತ ಸುದ್ದಿ