ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾಪಂ ಚುನಾವಣೆಯಲ್ಲಿ ಗೆದ್ದವರು, ಸೋತವರು ಪಕ್ಷಕ್ಕೆ ನಾಯಕರೇ; ಪ್ರಮೋದ್ ಮಧ್ವರಾಜ್

ಉಡುಪಿ: ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಗೆದ್ದ ಹಾಗೂ ಸ್ಪರ್ಧಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರುಗಿತು.

ಈ ಸಂದರ್ಭ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‍ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಗೆದ್ದವರು ಹಾಗೂ ಸೋತವರು ಎಲ್ಲರೂ ನಮ್ಮ ಪಕ್ಷಕ್ಕೆ ನಾಯಕರೇ. 5 ವರ್ಷ ಎಲ್ಲರೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವ ಮೂಲಕ ಪಕ್ಷ ಬಲಪಡಿಸುವಂತೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‍ನ ಬ್ಲಾಕ್ ಸಂಯೋಜಕ ವೈ. ಸುಕುಮಾರ್ ಮಾತನಾಡಿ, ಪ್ರತೀ ಬೂತ್ ಮಟ್ಟದಲ್ಲಿ 25 ಕಾರ್ಯಕರ್ತರ ಸಮಿತಿ ರಚಿಸಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಹಾಗೂ ಯಾವಾಗಲೂ ಜನರ ಸಂಪರ್ಕದಲ್ಲಿರುವಂತೆ ತಿಳಿಸಿದರು.

ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಪಂಚಾಯಿತಿ ಸದಸ್ಯರೂ ಆದ ಪ್ರಖ್ಯಾತ್ ಶೆಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ. ನರಸಿಂಹ ಮೂರ್ತಿ, ಬಿ. ಕುಶಲ್ ಶೆಟ್ಟಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಎಲ್ಲೂರು ಶಶಿಧರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

12/01/2021 05:05 pm

Cinque Terre

5.57 K

Cinque Terre

0

ಸಂಬಂಧಿತ ಸುದ್ದಿ