ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಾಳೆಯಿಂದ ಮುಖ್ಯಮಂತ್ರಿ ದ್ವಿದಿನ ಕರಾವಳಿ ಪ್ರವಾಸ

ಉಡುಪಿ: ಮುಖ್ಯಮಂತ್ರಿಯಾದ ನಂತರ ಎರಡನೇ ಬಾರಿಗೆ ನಾಳೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡುತ್ತಿರುವ ಬಿ.ಎಸ್. ಯಡಿಯೂರಪ್ಪ ಅವರು ಪರ್ಯಾಯ ಪಂಚ ಶತಮಾನೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಠದ ಕಾರ್ಯಕ್ರಮ ನಂತರ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು, ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ನಾಡಿದ್ದು (ಮಂಗಳವಾರ) ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ ಭೇಟಿ ನಡೆಸಲಿದ್ದಾರೆ. ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿ, ಮಧ್ಯಾಹ್ನ ಕುಂದಾಪುರ ತಾಲೂಕು ಕುಂಭಾಸಿ ಆನೆಗುಡ್ಡೆ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಸಂದರ್ಭ ಉಡುಪಿ ಜಿಲ್ಲೆಯ ಐದು ಮಂದಿ ಬಿಜೆಪಿ ಶಾಸಕರು, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು.

Edited By : Vijay Kumar
Kshetra Samachara

Kshetra Samachara

17/01/2021 06:10 pm

Cinque Terre

7.37 K

Cinque Terre

0

ಸಂಬಂಧಿತ ಸುದ್ದಿ