ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಲ್ಲವ, ಈಡಿಗ ನಾಮದಾರಿ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವಂತೆ ಸಿಎಂಗೆ ಮನವಿ

ಉಡುಪಿ: ಇಂದು ಉಡುಪಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಅವರು ರಾಜ್ಯಾದ್ಯಂತ ಇರುವ ಬಿಲ್ಲವ ಈಡಿಗ ನಾಮಧಾರಿ ಇನ್ನಿತರ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲು 50 ಕೋಟಿ ರೂ. ಈ ಬಾರಿಯ ಬಜೆಟ್‌ನಲ್ಲಿ ನೀಡುವಂತೆ ಮನವಿ ಮಾಡಿದರು.

ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈ ಬಾರಿಯ ಬಜೆಟ್‌ನಲ್ಲಿ ಉಪ ಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲು 50 ಕೋಟಿ ರೂ. ಕಾಯ್ದಿರಿಸುವುದಾಗಿ ತಿಳಿಸಿದರು.

ಸಮಾಜದ ಮುಖಂಡರಾದ ಬಿ. ಎನ್. ಶಂಕರ ಪೂಜಾರಿ, ಅಚ್ಯುತ ಕಲ್ಮಾಡಿ, ನವೀನ್ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

18/01/2021 07:04 pm

Cinque Terre

7.91 K

Cinque Terre

1

ಸಂಬಂಧಿತ ಸುದ್ದಿ