ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗೋವಿಗೆ ಪೂಜೆ ಸಲ್ಲಿಸಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಚಾಲನೆ ನೀಡಿದ ಸಿಎಂ

ಉಡುಪಿ: ಉಡುಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಚಾಲನೆ ನೀಡಿದ್ದಾರೆ.

ಇಂದು ಸಂಜೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ, ಈ ಮೂಲಕ ರಾಜ್ಯಾದ್ಯಂತ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಚಾಲನೆ ನೀಡಿದ್ದೇನೆ. ಮಹಾತ್ಮ ಗಾಂಧೀಜಿಯವರ ಕನಸು ನನಸಾಗುತ್ತಿದೆ.

ಸ್ವಾತಂತ್ರ್ಯ ಸಿಕ್ಕಿದ ತಕ್ಷಣ ಗೋಹತ್ಯೆ ನಿಷೇಧವಾಗಬೇಕೆಂದು ಅವರು ಬಯಸಿದ್ದರು. ಕರ್ನಾಟಕದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಜಾರಿಯಾಗುತ್ತಿದೆ ಎಂದರು.

ಇದೊಂದು ಐತಿಹಾಸಿಕ ನಿರ್ಣಯ ಎಂದ ಅವರು, ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೋಹತ್ಯೆಗೆ ಅವಕಾಶವಿಲ್ಲ.

ರಾಜ್ಯದ ಜನರ ಅಪೇಕ್ಷೆಯಂತೆ ಗೋಹತ್ಯೆ ನಿಷೇಧ ಜಾರಿ ಮಾಡಿದ್ದೇವೆ. ಇಂದಿನಿಂದ ರಾಜ್ಯದಲ್ಲಿ ಎಲ್ಲೂ ಗೋ ಹತ್ಯೆ ನಡೆಯುವಂತಿಲ್ಲ.

ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.

Edited By : Nirmala Aralikatti
Kshetra Samachara

Kshetra Samachara

18/01/2021 10:24 pm

Cinque Terre

7.48 K

Cinque Terre

1

ಸಂಬಂಧಿತ ಸುದ್ದಿ