ಉಡುಪಿ:ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಿ ಭರವಸೆಗಳ ಸಮಿತಿ ಸಭೆ ನಡೆಯಿತು .
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಇಲಾಖಾಧಿಕಾರಿಗಳ ಜೊತೆ ಚರ್ಚಿಸಲಾಯಿತು.
ಬೀದರ್ ನ ಬ್ರಿಮ್ಸ್ ಹಗರಣಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಈ ಹಗರಣದಲ್ಲಿ ಭಾಗಿಯಾಗಿರುವವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿಕೆ ಅನಿಲ್ ಕುಮಾರ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಚಿರಂಜೀವಿ ಅಧೀನ ಕಾರ್ಯದರ್ಶಿ ಶಿವಶಂಕರ, ಬ್ರಿಮ್ಸ್ ನಿರ್ದೇಶಕರಾದ ಶಿವಕುಮಾರ್ ಹಾಗೂ ಕರ್ನಾಟಕ ವಿಧಾನಸಭೆಯ ಭರವಸೆಗಳ ಸಮಿತಿ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
22/01/2021 10:00 am