ಉಡುಪಿ: ನಗರಸಭೆ ವ್ಯಾಪ್ತಿಯ ಸುಬ್ರಹ್ಮಣ್ಯ ನಗರ ವಾರ್ಡಿನ ಕಾರ್ಯಕರ್ತರ ಸಭೆ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿ ವಾರ್ಡಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಹಾಗೂ ಕುಂದುಕೊರತೆಯ ಬಗ್ಗೆ ಚರ್ಚಿಸಿದರು.
ಬಳಿಕ ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ದಿನೇಶ್ ಪೈ ಮತ್ತು ಸುಬೇದಾ ಅವರನ್ನು ಸನ್ಮಾನಿಸಲಾಯಿತು.
ನಗರಸಭೆ ಸದಸ್ಯರಾದ ಜಯಂತಿ, ಬಾಲಕೃಷ್ಣ ಶೆಟ್ಟಿ, ಬೂತ್ ಅಧ್ಯಕ್ಷ ಅನಂತಮೂರ್ತಿ ಭಟ್, ನಾರಾಯಣ, ಪಕ್ಷದ ಹಿರಿಯ ಕಾರ್ಯಕರ್ತರಾದ ಅಚ್ಚುತ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/01/2021 10:36 pm