ಉಡುಪಿ: ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ವಾರ್ಡಿನ ಅಭ್ಯರ್ಥಿಗಳು ಅಭೂತಪೂರ್ವ ಜಯಗಳಿಸಿದ ಹಿನ್ನೆಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಸಭೆಯಲ್ಲಿ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ವಾರ್ಡಿನ ಅಭ್ಯರ್ಥಿಗಳಾದ ರಾಘು ಕೊಳಂಬೆ, ಆನಂದ ಪೂಜಾರಿ, ಶ್ರೀಮತಿ ಲಕ್ಷ್ಮಿ ಇವರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷರಾದ ನಿತ್ಯಾನಂದ ನಾಯಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಪಕ್ಷದ ಪ್ರಮುಖರಾದ ರಘುಪತಿ ಬ್ರಹ್ಮಾವರ, ನಿಶಾನ್ ರೈ, ದಿನೇಶ್ ದೇವಾಡಿಗ ಉಪಸ್ಥಿತರಿದ್ದರು.
Kshetra Samachara
24/01/2021 10:52 pm