ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

ಉಡುಪಿ: ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳ ಸಾಧನೆ ಮೆಚ್ಚಿ ಮತ್ತು ಶಾಸಕ ಕೆ. ರಘುಪತಿ ಭಟ್ ಅವರ ಅಭಿವೃದ್ಧಿ ಕಾರ್ಯ ಬೆಂಬಲಿಸಿ ಪೆರಂಪಳ್ಳಿ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಅವರು ಬೆಂಬಲಿಗರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಶಾಸಕ ಕೆ. ರಘುಪತಿ ಭಟ್ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ವಿನಯ್ ಕಲ್ಮಾಡಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ನಗರಸಭೆಯ ನಾಮನಿರ್ದೇಶಿತ ಸದಸ್ಯರಾದ ಅರುಣಾ ಪೂಜಾರಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

29/01/2021 08:07 pm

Cinque Terre

4.55 K

Cinque Terre

0

ಸಂಬಂಧಿತ ಸುದ್ದಿ