ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪ್ರತೀ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಾಗ ಗುರುತಿಸಿ; ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, ಅವುಗಳನ್ನು ಪೋಷಿಸಲು ಅನುಕೂಲವಾಗುವಂತೆ ಪ್ರತಿಯೊಂದು ತಾಲೂಕಿನಲ್ಲಿ ಗೋಶಾಲೆ ಸ್ಥಾಪಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸೂಕ್ತ ಸ್ಥಳಾವಕಾಶ ಗುರುತಿಸುವಂತೆ ಅಧಿಕಾರಿಗಳಿಗೆ ಡಿ.ಸಿ. ಸೂಚನೆ ನೀಡಿದರು.

ಗೋ ಶಾಲೆಗಳನ್ನು ಆರಂಭಿಸುವ ಸಂದರ್ಭ, ಅದೇ ಸ್ಥಳದಲ್ಲಿ ಮೇವು ಬೆಳೆಯಲು ಸಾಧ್ಯವಿರುವಂತಹ ಜಾಗವನ್ನು ಗುರುತಿಸುವಂತೆ ನೀಲಾವರ ಗೋಶಾಲೆಯ ಟ್ರಸ್ಟಿ ಡಾ.ಸರ್ವೋತ್ತಮ ಉಡುಪ ಹೇಳಿದರು.

ಜಾನುವಾರುಗಳನ್ನು ಸಾಗಾಟ ಮಾಡುವಾಗ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಗಳಿಂದ ಅನುಮತಿ ಪಡೆದ ಅಗತ್ಯ ದಾಖಲಾತಿ ಜೊತೆಯಲ್ಲಿಯೇ ಇಟ್ಟುಕೊಂಡಿರಬೇಕು. ಇಲ್ಲವಾದಲ್ಲಿ ಜಾನುವಾರು ಮಾಲೀಕ, ವಾಹನ ಮಾಲೀಕ, ಚಾಲಕ, ಸಹಾಯಕ, ಜಾನುವಾರು ಸಾಗಾಟದ ಸಹಾಯಕ ಈ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ನಿಯಮದಲ್ಲಿ ಅವಕಾಶವಿದೆ. ಸಾಗಾಟ ಸಮಯದಲ್ಲಿ ಜಾನುವಾರುಗಳಿಗೆ ಯಾವುದೇ ಗಾಯಗಳಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾಗಾಟದ ಮೊದಲು ಯಥೇಚ್ಛ ನೀರು/ ಆಹಾರ/ ಹಸಿ ಹುಲ್ಲು, ವಾಹನದಲ್ಲಿ ಸರಿಯಾದ ಗಾಳಿ- ಬೆಳಕು ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಫರ್ಮಾನು ಹೊರಡಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

29/01/2021 11:16 pm

Cinque Terre

6.8 K

Cinque Terre

0

ಸಂಬಂಧಿತ ಸುದ್ದಿ