ಬೆಂಗಳೂರು: ಉಡುಪಿ ಶಾಸಕ ರಘುಪತಿ ಭಟ್ ಅವರು ಮಲ್ಪೆ ಮೀನುಗಾರರ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು.
ನಿಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ ಪಾಲ್ ಸುವರ್ಣ ಕೂಡ ಇದ್ದರು.
ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗವು ಮೀನುಗಾರಿಕೆಗೆ ಸಂಬಂಧಿಸಿದ ಬೇಡಿಕೆಗಳಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿತು.
Kshetra Samachara
05/02/2021 06:30 pm