ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಗಾಯತ್ರಿ, ಉಪಾಧ್ಯಕ್ಷರಾಗಿ ಅರುಣ್ ಜತ್ತನ್ ಆಯ್ಕೆಯಾಗಿದ್ದಾರೆ.
ಇಂದು ತೆಂಕನಿಡಿಯೂರು ಪಂಚಾಯಿತಿ ಕಚೇರಿಯಲ್ಲಿ ನಡೆದ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 14/12 ಮತದ ಅಂತರದಿಂದ ಗೆಲುವು ಸಾಧಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ತೆಂಕನಿಡಿಯೂರು ಪಂಚಾಯಿತಿ ಉಸ್ತುವಾರಿ ಕೆ. ರಾಘವೇಂದ್ರ ಕಿಣಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ತೆಂಕನಿಡಿಯೂರು ಪಂಚಾಯಿತಿ ಸಹ ಉಸ್ತುವಾರಿ ಸುಂದರ್ ಕಲ್ಮಾಡಿ, ತಾಪಂ ಉಪಾಧ್ಯಕ್ಷ ಶರತ್ ಬೈಲಕೆರೆ, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಸಾಲ್ಯಾನ್, ಕೃಷ್ಣ ಶೆಟ್ಟಿ, ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Kshetra Samachara
15/02/2021 09:33 pm