ಉಡುಪಿ:ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಸಣ್ಣನೀರಾವರಿ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕ ಶ್ರೀ ಕೆ. ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದೊಡ್ಡ ದೊಡ್ಡ ಕೆರೆಗಳನ್ನು ಕೆರೆ ಸಂಜೀವಿನಿ ಯೋಜನೆಯಡಿ ಹೂಳೆತ್ತುವುದು. ಹಾಗೂ ಕಿಂಡಿ ಅಣೆಕಟ್ಟುಗಳು ಇರುವ ಆಸುಪಾಸಿನ ಕೆರೆಗಳನ್ನು ಏತ ನೀರಾವರಿ ಮೂಲಕ ತುಂಬಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಅಲ್ಲದೆ ರಾಜ್ಯದಲ್ಲಿ ಕೆರೆಗಳ ಒತ್ತುವರಿಯಾಗುವುದನ್ನು ತಡೆಯುವುದು. ಸರ್ಕಾರಿ ಯೋಜನೆಗಳಲ್ಲಿ ಕೆರೆ ಒತ್ತುವರಿ ಯಾದರೆ ಕೆರೆಯ ಪಕ್ಕದ ಜಾಗವನ್ನು ವಶಪಡಿಸಿ ಸೇರಿಸಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ಜರುಗಿಸಿ ಎಂದು ಸಲಹೆ ನೀಡಿದರು.
ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಎಚ್. ಎಲ್. ಪ್ರಸನ್ನ ಪ್ರಧಾನ ಇಂಜಿನಿಯರ್ ಸಣ್ಣ ನೀರಾವರಿ ಇಲಾಖೆ (ದಕ್ಷಿಣ ವಲಯ) ಜಿ. ಟಿ. ಸುರೇಶ್, ಮುಖ್ಯ ಇಂಜಿನಿಯರ್, ಸಣ್ಣ ನೀರಾವರಿ (ಉತ್ತರ ವಲಯ), ಗೋಕುಲ್ ದಾಸ್, ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆ ಮಂಗಳೂರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
18/02/2021 05:13 pm