ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕರಾವಳಿಗೆ ಸ್ಥಳೀಯ ಕುಚಲಕ್ಕಿ ನೀಡಿ: ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ.

ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಇದರಿಂದಾಗಿ ಪಡಿತರದ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್ ಅಂಗಾರ ರವರ ನೇತೃತ್ವದಲ್ಲಿ ಮನವಿ ಮಾಡಲಾಯಿತು.

Edited By : Nagaraj Tulugeri
Kshetra Samachara

Kshetra Samachara

18/02/2021 09:38 pm

Cinque Terre

9.78 K

Cinque Terre

3

ಸಂಬಂಧಿತ ಸುದ್ದಿ